ನವದೆಹಲಿ:
ಭಾರತದಲ್ಲಿ ಭಾನುವಾರ ಕೊರೋನಾ ಸ್ಫೋಟಗೊಂಡಿದ್ದು, ಸಾರ್ವಕಾಲಿಕ ಗರಿಷ್ಟ 28,637 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 28,637 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಂದೇ ದಿನ 551 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,49,553 ಏರಿಕೆಯಾಗಿದೆ. ಸಾವಿನ ಸಂಖ್ಯೆ ಕೂಡ 22,674ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. ಈ ನಡುವೆ 8,49,553 ಮಂದಿ ಸೋಂಕಿತರ ಪೈಕಿ 5,34,621 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 2,92,258 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ