ಹಾಸನ :
ರಾಜ್ಯದಲ್ಲಿ ಈಗಾಗಲೇ ಹಲವಾರು ಮಂದಿ ಪಕ್ಷದಿಂದ ಪಕ್ಷಕ್ಕೆ ಜಿಗಿಯುತ್ತಿದ್ದು, ಈಗ ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಕಾಂಗ್ರೆಸ್ನ ಎ.ಮಂಜು. ಹಾಸನದಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳುವ ಮೂಲಕ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದಾರೆ
ನಿನ್ನೆ ಹಾಸನದ ಆರ್ ಪುರಂನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಎ.ಮಂಜು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಆ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾದರು.
ಹಾಸನ ಶಾಸಕ ಪ್ರೀತಂ ಗೌಡ ಅವರು ಬಿಜೆಪಿ ಶಾಲು ಹೊದಿಸಿ, ಪಕ್ಷದ ಬಾವುಟ ನೀಡಿ ಸ್ವಾಗತ ನೀಡಿದರು. ಇಂದು ರಾಜ್ಯ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಮಂಜು ಅವರ ಸೇರ್ಪಡೆ ಬಗ್ಗೆ ಘೋಷಣೆಯಾಗಲಿದೆ. ಇದರೊಂದಿಗೆ ಹಾಸನದಲ್ಲಿ ಎ.ಮಂಜುಗೆ ಬಿಜೆಪಿ ಟಿಕೆಟ್ ಖಚಿತ ಎನ್ನಲಾಗಿದೆ.
ಜೆಡಿಎಸ್‍ಗೆ ಪ್ರಬಲ ಪೈಪೋಟಿ ನೀಡಬಲ್ಲ ಎ.ಮಂಜು ಬಿಜೆಪಿ ಸೇರಿದ್ದು, ಅವರೊಂದಿಗೆ ಬೆಂಬಲಿಗರು ಪಕ್ಷಾಂತರ ಮಾಡಲು ನಿರ್ಧರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ