ಮೈಸೂರು ಮೃಗಾಲಯಕ್ಕೆ ಮೂರು ಆಫ್ರಿಕನ್ ಚೀತಾ!!

ಮೈಸೂರು:

     ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಮೂರು ಹೊಸ ಚೀತಾಗಳನ್ನು ಕರೆತರಲಾಗಿದ್ದು, ಸಾರ್ವಜನಿಕ ವೀಕ್ಷಣೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

      ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು, ಮೈಸೂರು ಮೃಗಾಲಯಕ್ಕೆ ಮೂರು ಹೊಸ ಚೀತಾವನ್ನು ಮೈಸೂರಿಗೆ ಕರೆತರಲಾಗಿದೆ. ದೇಶದಲ್ಲಿ ಹೈದರಾಬಾದ್ ಬಿಟ್ಟರೆ ಮೈಸೂರಿನಲ್ಲಿ ಮಾತ್ರ ಇದೆ. ಆಗಸ್ಟ್ 17 ರಂದು ಪ್ರಾಣಿ ವಿನಿಮಯ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಒಂದು ಗಂಡು, ಎರಡು ಹೆಣ್ಣು ಚೀತಾಗಳು ಮೈಸೂರು ಮೃಗಾಲಯಕ್ಕೆ ಆಗಮಿಸಿವೆ ಎಂದು ತಿಳಿಸಿದರು.

      ಮೈಸೂರಿನಲ್ಲಿ ಸರಳ ದಸರಾವನ್ನು ಮಾತ್ರ ಆಚರಿಸಲಾಗುವುದು. ಮೃಗಾಲಯ, ಚಾಮುಂಡಿ ಬೆಟ್ಟ ಹಾಗೂ ದಸರಾ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಬರುವ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಹೇರಲಾಗುತ್ತದೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ತಂಡ ನೀಡಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ. ಸಾರ್ವಜನಿಕ ನಿರ್ಬಂಧ ಅನಿವಾರ್ಯ. ಈ ಹಿನ್ನೆಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಎಂದರು

      ನಾಳೆ ಮೈಸೂರಿಗೆ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಜಿಲ್ಲಾಡಾಳಿತದಿಂದ ಈಗಾಗಲೇ ಎಲ್ಲ ಸಿದ್ಧತೆಗಳು ಆಗಿವೆ. ನಾಡಿದ್ದು ಮುಖ್ಯಮಂತ್ರಿಗಳು ನಾಡಹಬ್ಬ ದಸರಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ