ಬೆಂಗಳೂರು :
ಇಂದಿನಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ಸ್ಥಗಿತವಾಗಲಿದ್ದು, ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ ನೀಡಿದಂತಾಗಿದೆ.
ಹೌದು, ಲೋಕಸಭೆ ಚುನಾವಣೆಯ ಬಗ ಪ್ರಚಾರ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗಲಿದ್ದು, ಇಂದು ಸಂಜೆಯಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.
ರಾಜ್ಯದಲ್ಲಿ ಏ. 18 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಇಂದಿನಿಂದ ಮೂರು ದಿನಗಳ ಕಾಲ ಬಾರ್ ಬಂದ್ ಮಾಡುವಂತೆ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ದ್ವಿತೀಯ ಹಂತದ ಚುನಾವಣೆಯ ಸಂದರ್ಭದಲ್ಲಿ ದಿನಾಂಕ 23 ರಿಂದ 24ನವರೆಗೆ ಬಾರ್ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮತದಾನ ಮುಕ್ತಾಯಕ್ಕೆ 48 ತಾಸು ಮುನ್ನ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
