ಮಂಗಳೂರು :
ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಇಂದು ಒಂದೇ ದಿನ ಮೂವರು ಮೃತಪಟ್ಟಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನ ಓರ್ವ ಕೊರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದರೇ, ಈ ಬಳಿಕ ಮಂಗಳೂರಿನಲ್ಲಿ ಇದೀಗ ಓರ್ವ ವೃದ್ಧ ಸಾವನ್ನಪ್ಪಿದ್ದಾರೆ. ಕಲಬುರಗಿಯಲ್ಲಿ ಕೂಡ ಓರ್ವ ಮೃತಪಟ್ಟಿದ್ದಾರೆ.
ಮಂಗಳೂರಿನಲ್ಲಿ 80 ವರ್ಷದ ವೃದ್ಧೆ ಮೃತಪಟ್ಟಿದ್ದು, ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಆಂಧ್ರ ಪ್ರದೇಶದಿಂದ ಬಂದಿದ್ದ 60 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ. ಕಲಬುರಗಿಯಲ್ಲಿ ದಾಖಲಾದ ಕೊರೊನಾ ಪಾಸಿಟಿವ್ ಕೇಸ್‌ನ ಹತ್ತರಲ್ಲಿ ಓರ್ವ ಮೃತಪಟ್ಟಿದ್ದಾರೆ.
ಇಂದು ಒಂದೇ ದಿನ ಕರ್ನಾಟಕದಲ್ಲಿ ಮೂವರನ್ನು ಕೊರೋನಾ ಬಲಿ ಪಡೆಯುವ ಮೂಲಕ ಮಂಗಳೂರಿನಲ್ಲಿ 5ನೇ ಕೊರೋನಾ ಬಲಿ ಆದ್ರೇ,ಕಲುರಗಿಯಲ್ಲಿ ಇದುವರೆಗೆ 7 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ