ಲಾರಿಗೆ ಡಿಕ್ಕಿ ಹೊಡೆದ ಕಾರು : ಮೂವರ ದುರ್ಮರಣ!!

ಹಾವೇರಿ :

      ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಗ್ರಾಮದ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 

      ದಾವಣಗೆರೆ ಮೂಲದ ಸುಮಂತ್(23), ದರ್ಶನ್(24) ಹಾಗೂ ಸುನೀಲ್(23) ಮೃತ ದುರ್ದೈವಿಗಳು. ಗೋವಾದಿಂದ ದಾವಣಗೆರೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

      ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap