ಕೋಲಾರ :
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ತಿಂಡ್ಲಿ ರಸ್ತೆಯಲ್ಲಿ ನಡೆದಿದೆ.
25 ವರ್ಷದ ಯಲ್ಲಯ್ಯ , ಯಶವಂತ (24), ವೆಂಕಟೇಶಯ್ಯ ಮೃತ ಬೈಕ್ ಸವಾರರು. ಮೃತರು ಹೊಗಳಗೆರೆ ಗಾಂಧಿ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.
ಕೂಲಿ ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
