ಬೆಂಗಳೂರು :
ಇನ್ನು ಡೆಡ್ಲಿ ಕೊರೊನಾಗೆ ಬೆಂಗಳೂರಿನಲ್ಲಿ ಮತ್ತೊಬ್ಬರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಇಂದು ಮಧ್ಯಾಹ್ನ ಇಲಾಖೆ ಬಿಡುಗಡೆಗೊಳಿಸಿರುವ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ನ 82 ವರ್ಷದ ವ್ಯಕ್ತಿ ಹಾಗೂ ಬೆಂಗಳೂರು ಗ್ರಾಮಂತರಕ್ಕೆ ಸೇರಿದ 63 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ತಿಳಿಸಿದೆ.
Covid19: Morning Bulletin
Total Confirmed Cases: 598
Deceased: 25
Recovered:255
New Cases: 9#KarnatakaFightsCorona #IndiaFightsCorona pic.twitter.com/DfAU1ihO1O— B Sriramulu (@sriramulubjp) May 2, 2020
ಈ ನಡುವೆ ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಇದರಂತೆ ಸೋಂಕಿತ 598 ಮಂದಿಯ ಪೈಕಿ 255 ಮಂದಿ ವೈರಸ್ ನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ