ಬೆಂಗಳೂರಿನಲ್ಲಿ ಇಂದು ನಾಲ್ವರಿಗೆ ಹೊಸ ಪ್ರಭೇದದ ಕೊರೋನಾ!!

ಬೆಂಗಳೂರು : 

       ರಾಜ್ಯ ರಾಜಧಾನಿಯಲ್ಲಿ ಇಂದು ಮೂವರಿಗೆ ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ಸೋಂಕು ತಗುಲುವ ಮೂಲಕ ದೇಶದಲ್ಲಿ ಹೊಸ ಪ್ರಭೇದದ ಕೊರೋನಾ ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. 

 ಈಗಾಗಲೇ ರಾಜ್ಯ ರಾಜಧಾನಿ ಹಾಗೂ ಶಿವಮೊಗ್ಗ ಸೇರಿದಂತೆ 7 ಜನರಿಗೆ ಬ್ರಿಟನ್ ರೂಪಾಂತರಿ ವೈರಸ್ ಸೋಂಕು ತಗುಲಿದ್ದನ್ನು ಐಸಿಎಂಆರ್ ವರದಿಯಿಂದ ದೃಢಪಟ್ಟಿತ್ತು. ಇದೀಗ ಇಂದು ಮತ್ತೆ ಮೂವರಿಗೆ ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ರಾಜ್ಯದಲ್ಲಿ ರೂಪಾಂತರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

      ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ದೇಶದ ನಾಲ್ವರಿಗೆ ಬ್ರಿಟನ್ ರೂಪಾಂತರಿ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಬ್ರಿಟನ್ ವೈರಸ್ ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap