ದಾಬಸ್‍ಪೇಟೆ:
ಎನ್.ಎಸ್.ಎಸ್.ಕ್ಯಾಂಪ್‍ಗೆ ಬಂದಿದ್ದ ಮೂವರು ವಿದ್ಯಾರ್ಥಿಗಳು ಕೆರೆಯ ಬಳಿ ಸೆಲ್ಫಿ ತೆಗೆಯಲು ಹೋಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ದಾಬಸ್‍ಪೇಟೆ ಪೊಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಳ ತಾಲೂಕಿನ ಹಳೆನಿಜಗಲ್ಲು ಕೆರೆಯಲ್ಲಿ ಮುಳುಗಿ ಪೂರ್ಣಚಂದ್ರ, ಮೊಹಮ್ಮದ್, ಶಶಾಂಕ್ ಮೃತಪಟ್ಟಿರು ದುರ್ದೈವಿಗಳು
ದಾಬಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇನಿಜಗಲ್ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಕಾರ್ಯಕ್ರಮದಲ್ಲಿ ತುಮಕೂರಿನ ಸಿದ್ದಗಂಗಾ ಪಿಯು ಕಾಲೇಜಿನಿಂದ ಸುಮಾರು 50 ಮಂದಿ ವಿದ್ಯಾರ್ಥಿಗಳು ಭಾಗವಹಿಸಿ, ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದರು.
ಘಟನೆ:
ಸ್ವಚ್ಚತಾ ಕಾರ್ಯದ ಬಗ್ಗೆ ಅಧ್ಯಯನ ನಡೆಸುತ್ತಿದ್ದರು. ಅವರಲ್ಲಿ ನಾಲ್ವರು ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕ ನೀರಿನಲ್ಲಿ ನಿಂತಿದ್ದ ವೇಳೆ ಓರ್ವ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದ ವೇಳೆ ಸೆಲ್ಫಿ ತೆಗೆಯುತ್ತಿದ್ದ ವಿದ್ಯಾರ್ಥಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಉಳಿದ ನಾಲ್ವರು ವಿದ್ಯಾರ್ಥಿಯನ್ನು ರಕ್ಷಿಸಲು ಹೋಗಿದ್ದಾರೆ. ಆದರೆ ಇವರಲ್ಲಿ ಮತ್ತಿಬ್ಬರು ವಿದ್ಯಾರ್ಥಿಗಳು ನೀರಿನಾಳಕ್ಕೆ ಮುಳುಗಿದ್ದಾರೆ.
ಮೃತದೇಹಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಯುತ್ತಿದ್ದು, ಈ ಪ್ರಕರಣವು ದಾಬಸ್‍ಪೇಟೆ ಪೊಲೀಸ್‍ಠಾಣೆಯಲ್ಲಿ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ