ಕೊಡಗು:
ಕಾವೇರಿ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸೋಮವಾಪೇಟೆ ತಾಲ್ಲೂಕಿನ ಕುಶಾಲನಗರದಲ್ಲಿ ನಡೆದಿದೆ.
ಆಕಾಶ್, ಗಗನ್, ಶಶಾಂಕ್ ಸಾವನ್ನಪ್ಪಿರುವ ದುರ್ದೈವಿಗಳು. ಮೂವರು ವಿದ್ಯಾರ್ಥಿಗಳು ಮಡಿಕೇರಿ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಇಂದು ರಂಜಾನ್ ಹಬ್ಬದ ಪ್ರಯುಕ್ತ ಕಾಲೇಜಿಗೆ ರಜೆ ಇದ್ದ ಹಿನ್ನಲೆಯಲ್ಲಿ ಕಾವೇರಿ ನದಿಯ ನೀರನಲ್ಲಿ ಆಟವಾಡಲು ತೆರಳಿದ್ದರು. ನೀರಿನ ಆಳ ತಿಳಿಯದೇ ಮುಂದೆ ಸಾಗಿರುವ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದ್ದು, ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
