ರಾಜ್ಯದಲ್ಲಿ ಮಾರಕ ಕೊರೊನಾಗೆ ಇಂದು 30 ನೇ ಬಲಿ!!

ಬೆಂಗಳೂರು :

     ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 700 ರ ಗಡಿ ದಾಟಿದ್ದು, ದಾವಣಗೆರೆಯಲ್ಲಿ ಕೊರೊನಾ ಮಹಾಮಾರಿಗೆ ಇಂದು 30 ನೇ ಬಲಿ ಪಡೆದಿದೆ.

 

       ದಾವಣಗೆರೆಯ 55 ವರ್ಷದ ಮಹಿಳೆಯೋರ್ವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ರಕ್ತದೊತ್ತಡದ ಕಾಯಿಲೆಯಿಂದ ಕೂಡ ಬಳಲುತ್ತಿದ್ದು, ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದರು. ವೈದ್ಯಕೀಯ ತಪಾಸಣೆ ವೇಳೆ ಆಕೆಯಲ್ಲಿ ಸೋಂಕು ದೃಢಪಟ್ಟಿತ್ತು. ಮೊದಲೇ ಅಧಿಕ ರಕ್ತದೊತ್ತಡ ಹಾಗೂ ಶುಗರ್ ನಿಂದ ಬಳಲುತ್ತಿದ್ದ ಅವರಲ್ಲಿ ಸೋಂಕು ದೃಢಪಟ್ಟ ಬಳಿಕ ಈ ಕಾಯಿಲೆಗಳು ಮತ್ತಷ್ಟು ಉಲ್ಬಣಿಸಿತ್ತು. ಚಿಕಿತ್ಸೆ ಫಲಿಸದೇ ಇಂದು ಮಹಿಳೆ ಆಸ್ಪತ್ರೆಯಲ್ಲೇ ಅಸು ನೀಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

      ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೊನಾಗೆ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ