ಕರ್ನಾಟಕದಲ್ಲಿ ಕೊರೊನಾಗೆ ಇಂದು 32 ನೇ ಬಲಿ!!

ಬೆಂಗಳೂರು :

     ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ವೈರಸ್ ಗೆ ಕರ್ನಾಟಕದಲ್ಲಿ ಮತ್ತೊಂದು ಬಲಿಯಾಗಿದೆ.

      ಕಲಬುರಗಿಯಲ್ಲಿ ಕೊರೊನಾ ಸೋಂಕಿತ 60 ವರ್ಷದ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. 

     ಮೃತ ವೃದ್ದ ಕಂಟೈನ್ಮೆಂಟ್‌ ಝೋನ್‌ ನಲ್ಲಿ ವಾಸವಾಗಿದ್ದು, ಈ ವೇಳೆ ಮನೆಯಲ್ಲೇ ಇರುವಂತೆ ಕುಟುಂಬಸ್ಥರು ಹೇಳಿದರೂ ಅದನ್ನು ಕೇಳದೆ ಓಡಾಡಿದ್ದರೆನ್ನಲಾಗಿದೆ. ಇದರಿಂದ ಸೋಂಕು ತಗುಲಿದ್ದು, ಕೆಲ ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೂಲಕ ಕಿಲ್ಲರ್ ಕೊರೊನಾಗೆ ಕಲಬುರಗಿಯಲ್ಲಿ ಬಲಿಯಾದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

      ಈ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 32 ಕ್ಕೆ ಏರಿಕೆಯಾಗಿದ್ದು, ಇನ್ನು ಇಂದು ಒಂದೇ ದಿನ ರಾಜ್ಯದಲ್ಲಿ 26 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 951 ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ