ರಾಜ್ಯದಲ್ಲಿ ಇಂದು ಒಂದೇ ದಿನ 34 ಜನರಿಗೆ ಕೊರೋನಾ ದೃಢ!!

ಬೆಂಗಳೂರು :

      ರಾಜ್ಯದಲ್ಲಿ ಇಂದು ಮತ್ತೆ ಕೊರೊನಾ ಸೋಂಕಿನ ಸರಣಿ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು 34 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 313ಕ್ಕೇ ಏರಿಕೆಯಾಗಿದೆ.  

      ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಐವರಿಗೆ, ಬೆಳಗಾವಿಯ 17 ಜನರಿಗೆ, ಕಲಬುರ್ಗಿಯಲ್ಲಿ ಒಬ್ಬರಿಗೆ, ಮೈಸೂರಿನ ಮೂವರಿಗೆ ಮತ್ತು ವಿಜಯಪುರದ 7 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ.

      ಒಟ್ಟಾರೆಯಾಗಿ ಇಂದು ಹೊಸದಾಗಿ 34 ಜನರಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಆಗಿ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ.

      ಇದುವರೆಗೆ ಕೊರೊನಾ ಸೋಂಕಿನಿಂದ 13 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, 82 ಕೊರೊನಾ ವೈರಸ್ ಸೋಂಕು ಪೀಡಿತರು ಗುಣಮುಖರಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap