ಬೆಂಗಳೂರು :
ರಾಜ್ಯದಲ್ಲಿ ಇಂದು ಮತ್ತೆ ಕೊರೊನಾ ಸೋಂಕಿನ ಸರಣಿ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು 34 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 313ಕ್ಕೇ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಐವರಿಗೆ, ಬೆಳಗಾವಿಯ 17 ಜನರಿಗೆ, ಕಲಬುರ್ಗಿಯಲ್ಲಿ ಒಬ್ಬರಿಗೆ, ಮೈಸೂರಿನ ಮೂವರಿಗೆ ಮತ್ತು ವಿಜಯಪುರದ 7 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 34 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 313ಕ್ಕೆ ಏರಿದೆ. ಇದುವರೆಗೆ 13 ಜನ ಮೃತಪಟ್ಟು, 82 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ನಾಗರಿಕರು ಆತಂಕ ಪಡೆದೆ ಮನೆಯಲ್ಲಿಯೇ ಇರಬೇಕೆಂದು ವಿನಂತಿ#ಮನೆಯಲ್ಲೇಇರಿ pic.twitter.com/nuRhsjpbA5
— B Sriramulu (@sriramulubjp) April 16, 2020
ಒಟ್ಟಾರೆಯಾಗಿ ಇಂದು ಹೊಸದಾಗಿ 34 ಜನರಿಗೆ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಆಗಿ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ.
ಇದುವರೆಗೆ ಕೊರೊನಾ ಸೋಂಕಿನಿಂದ 13 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, 82 ಕೊರೊನಾ ವೈರಸ್ ಸೋಂಕು ಪೀಡಿತರು ಗುಣಮುಖರಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ