ರಾಮನಗರ :
ಕೆರೆಗೆ ಕಾರು ಉರುಳಿಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೇವಮಾಚೋಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ಅಗ್ರಹಾರದ ನಿವಾಸಿಗಳಾದ ಸುನೀಲ್, ಸಂತೋಷ್, ಮಂಜುನಾಥ್ ಹಾಗೂ ರಾಘವೇಂದ್ರ ಮೃತ ದುರ್ದೈವಿಗಳು. ಘಟನೆಯಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಐವರು ಯುವಕರು ಕಾರಿನಲ್ಲಿ ಬೆಂಗಳೂರಿನಿಂದ ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗಾಗೆ ಹೋಗುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಕೆರೆಗೆ ಉರುಳಿ ಬಿದ್ದಿದೆ.
ಕಾರಿನ ಒಳಗಡೆ ನೀರು ತುಂಬಿಕೊಂಡಿತ್ತು. ಈ ವೇಳೆ ಕಾರಿನಿಂದ ಹೊರಗೆ ಬರಲು ಸಾಧ್ಯವಾಗದೇ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ