ಬಳ್ಳಾರಿ :
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಬಳ್ಳಾರಿಯಲ್ಲಿ ಕೊರೊನಾ ಮಹಾಮಾರಿಗೆ ನಾಲ್ವರು ಬಲಿಯಾಗಿದ್ದಾರೆ.
ನೆರೆಯ ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ ಆದೋನಿಯ 60 ವರ್ಷದ ಕೊರೊನಾ ಸೋಂಕಿತ, ಬಳ್ಳಾರಿ ತಾಲೂಕಿನ ರೂಪನ ಗುಡಿ ಹೋಬಳಿಯ 65 ವರ್ಷದ ಸೋಂಕಿತ, ಬಳ್ಳಾರಿ ನಗರದ ಕೋಟೆ ಪ್ರದೇಶದ 63 ವರ್ಷದ ಮಹಿಳೆ, ಬಳ್ಳಾರಿಯ ರಾಜೇಶ್ವರಿ ನಗರದ 58 ವರ್ಷದ ಸೋಂಕಿತ ಸೇರಿ ಒಟ್ಟು ನಾಲ್ಕು ಮಂದಿ ಮೃತಪಟ್ಟಿದ್ದಾರೆಂದು ಡಿಸಿ ನಕುಲ್ ತಿಳಿಸಿದ್ದಾರೆ.
ಕೊರೊನಾ ವೈರಸ್ ಕಂಡು ಬಂದ ಹಿನ್ನೆಲೆಯಲ್ಲಿ ಬಳ್ಳಾರಿಯ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ ಕಿಲ್ಲರ್ ಸೋಂಕಿಗೆ 19 ಮಂದಿ ಬಲಿಯಾಗಿದ್ದಾರೆ. ದಿನೇ ದಿನೇ ಜಿಲ್ಲೆಯಲ್ಲಿ ಸಾವನ್ನಪ್ಪುತ್ತಿರುವ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಜಿಲ್ಲಾಡಳಿತ ಕಠಿಣ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ