ಚಿಕ್ಕಬಳ್ಳಾಪುರ:
ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಹಸೀನಾ, ಶಾಜಿಯಾ, ಸಾನಿಯಾ ಮತ್ತು ಜೊಯಾ ಎಂದು ಗುರುತಿಸಲಾಗಿದೆ. ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿ ಮೂಲದವರಾದ ಇವರು ಆಧಾರ್ ಕಾರ್ಡ್ ಮಾಡಿಸಲು ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.
ಇಂದು ಬೆಳಗ್ಗೆ ಆಟೋದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದ ಬಳಿ ಗುಂಡಿ ಇರುವುದನ್ನು ಗಮನಿಸಿದ ಚಾಲಕ ಅದನ್ನು ತಪ್ಪಿಸಲು ಹೋಗಿ ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಇನ್ನು ಆಟೋದಲ್ಲಿ 10 ಜನ ಪ್ರಯಾಣಿಸುತ್ತಿದ್ದು ಇವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಇನ್ನು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
