ಬೆಂಗಳೂರು:
ರಾಜ್ಯ ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರ ರಜೆ ಸೇರಿದಂತೆ ಜಯಂತಿಗಳಂದು ನೀಡಲಾಗುವ ರಜೆಗಳನ್ನು ಮುಂದುವರೆಸುವುದಕ್ಕೆ ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದಕೊಳ್ಳಲಾಗಿದ್ದು, ಕನಕ ಜಯಂತಿ, ಬಸವ ಜಯಂತಿ, ವಾಲ್ಮೀಕಿ ಜಯಂತಿ, ಮಹಾವೀರ ಜಯಂತಿ, ಮಹಾಲಯ ಅಮಾವಾಸ್ಯೆಗಳ ರಜೆಯನ್ನು ರದ್ದುಗೊಳಿಸುವ ತೀರ್ಮಾನವನ್ನು ಸರ್ಕಾರ ಕೈಬಿಟ್ಟಿದೆ.
ನಾಲ್ಕನೇ ಶನಿವಾರ ರಜೆ ಸೇರಿ, ಜಯಂತಿಗಳ ರಜೆ ಮುಂದುವರಿಕೆಗೆ ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟದ ತೀರ್ಮಾನಕ್ಕೆ ಮುಖ್ಯಮಂತ್ರಿಗಳ ಅಂಕಿತ ಒಂದೇ ಬಾಕಿ ಉಳಿದಿದ್ದು, ಅವರು ಕಡತಕ್ಕೆ ಸಹಿ ಹಾಕಿದ ಬಳಿಕ ಅಧಿಕೃತಗೊಳ್ಳಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ