ಕಲಬುರಗಿ :
ಸೂರ್ಯ ನಗರಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ವಠಾರ ಶಾಲೆಯಲ್ಲಿ ಅಭ್ಯಾಸ ಮಾಡುತಿದ್ದ ನಾಲ್ವರು ಮಕ್ಕಳಿಗೆ ಕೊರೊನಾ ಸೋಂಕು ವಕ್ಕರಿಸಿದೆ.
ಈ ಮುಂಚೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್-19 ಪರೀಕ್ಷೆ ಗೆ ಒಳಪಡಿಸಲಾಗಿತ್ತು.
ನಂತರ 20 ಶಿಕ್ಷಕರು ಸೇರಿ 207 ವಿದ್ಯಾರ್ಥಿಗಳಿಗೆ ಕೊರೊನಾ ನೆಗೆಟಿವ್ ಬಂದಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇನ್ನೂ 24 ವಿದ್ಯಾರ್ಥಿಗಳ ವರದಿ ಬರಬೇಕಿದ್ದು, ಇನ್ನುಳಿದ ವಠಾರ ಶಾಲೆ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಇದರಿಂದ ಹೆದರಿ ತಮ್ಮ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಹೆದರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
ಈ ಕುರಿತು ಬಿಇಒ ಚಿತ್ರಶೇಖರ ದೇಗಲಮಡಿ ಈ ಕುರಿತು ಪ್ರತಿಕ್ರಿಯಿಸಿ, ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸದ್ಯಕ್ಕೆ ವಠಾರ ಶಾಲೆ ಬಂದ್ ಮಾಡುವಂತೆ ಸೂಚಿಸಿದ್ದೇನೆ. ಇಂದು ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಲಿದ್ದೇನೆ ಎಂದರು.
ಮಾಶಾಳ ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಲು ಒಂದೊಂದು ಕಡೆ 40 ವಿದ್ಯಾರ್ಥಿಗಳಂತೆ ಒಟ್ಟು 19 ವಠಾರ ಶಾಲೆಗಳನ್ನು ಗುರುತಿಸಲಾಗಿತ್ತು. ಇದೀಗ ಉನ್ನತಾಧಿಕಾರಿಗಳ ಸೂಚನೆಯಂತೆ ಸೋಂಕು ದೃಢಪಟ್ಟಿರುವ 5 ವಠಾರ ಶಾಲೆಗಳನ್ನು 2 ವಾರ ಸೀಲ್‌ಡೌನ್ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ