ಬೆಂಗಳೂರು :
ವೀರಶೈವ ಲಿಂಗಾಯತ ಒಳಪಂಗಡಗಳಿಗೆ ಮೀಸಲಾತಿ ನೀಡುವಂತೆ ಕೋರಿ ವಿಜಯಪುರ ಜಿಲ್ಲೆಯ ಸುಮಾರು 40 ಮಂದಿ ಸ್ವಾಮೀಜಿಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿತು.
ದಾವಣಗೆರೆ ಕಾರ್ಯಕ್ರಮದಿಂದ ವಾಪಸ್ ಆಗಿ ವಿಶ್ರಾಂತಿಯಲ್ಲಿದ್ದ ಸಿಎಂ, ಕಾವೇರಿ ನಿವಾಸದ ಬಳಿ ಸ್ವಾಮೀಜಿಗಳ ನಿಯೋಗ ಬಂದ ಸುದ್ದಿ ತಿಳಿಯುತ್ತಿದ್ದಂತೆ ಮಾತನಾಡಿಸಲು ಹೊರ ಬಂದರು.
ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಗೆ ಒಳಪಡಿಸುವ ಮತ್ತು ಈಗಾಗಲೇ ಚಾಲ್ತಿಯಲ್ಲಿರುವ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವುದು ಹಾಗೂ ವೀರಶೈವ ಲಿಂಗಾಯತ ಒಳ ಪಂಗಡಗಳಿಗೆ ಮೀಸಲಾತಿ ಕಲ್ಪಿಸಿಕೊಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ