ಬೆಂಗಳೂರು :
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ 44 ಮದ್ಯದ ಅಂಗಡಿಗಳ ಲೈಸೆನ್ಸ್ ಗಳನ್ನು ರದ್ದು ಮಾಡಲಾಗಿದೆ.
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಈ ವೇಳೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಆದರೆ ಮದ್ಯ ಪ್ರಿಯರು ಹಲವು ಅಂಗಡಿಗಳನ್ನು ಓಪನ್ ಮಾಡಿಸಿದ್ದರು. ಅಂಗಡಿ ಮಾಲೀಕರು ಮದ್ಯ ಮಾರಾಟಕ್ಕೆ ಮುಂದಾಗಿದ್ದರು. ಇಂತಹವರಿಗೆ ಅಬಕಾರಿ ಇಲಾಖೆ ಬಿಗ್ ಶಾಕ್ ನೀಡಿದೆ
ಕೆಲ ಮದ್ಯದಂಗಡಿಗಳಿಗೆ ಎಚ್ಚರಿಕೆ ನೀಡಿದ್ದರೂ ಕೂಟ ಅಕ್ರಮವಾಗಿ ಮದ್ಯ ಮಾರಾಟಕ್ಕೆ ಮುಂದಾಗಿದ್ದರಿಂದ 44 ಮದ್ಯದ ಅಂಗಡಿಗಳ ಲೈಸೆನ್ಸ್ ರದ್ದು ಮಾಡಿ ಅಬಕಾರಿ ಇಲಾಖೆ ಆದೇಶಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/liquor.gif)