ಬೀದರ್:
ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ವೈರಸ್ ಗೆ ಕರ್ನಾಟಕದಲ್ಲಿ ಮತ್ತೊಂದು ಬಲಿಯಾಗಿದೆ.
ಬೀದರ್‌ನ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೊನಾ ಸೋಂಕು ಪತ್ತೆಯಾಗಿತ್ತು. ಅವರನ್ನು ರೋಗಿ-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬ್ರೀಮ್ಸ್‌ನ ಐಸೋಲೇಷನ್ ವಾರ್ಡಿನಲ್ಲಿ ಇಂದು ಮೃತಪಟ್ಟಿದ್ದಾರೆ.
ಈ ಮೂಲಕ ಬೀದರ್ ಜಿಲ್ಲೆಯಲ್ಲಿ ಕೊರೋನಾಗೆ ಮೂರನೇ ಬಲಿಯಾಗಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 45ಕ್ಕೆ ಏರಿಯಾದಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ