ತುಮಕೂರು : ಭೀಕರ ಬಸ್ ಅಪಘಾತ : 5 ಮಂದಿ ಸಾವು!!!

ತುಮಕೂರು :

     ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 5 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಧಾರುಣ ಘಟನೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರ ಬಳಿ ನಡೆದಿದೆ.

    ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ವಿಜಯಲಕ್ಷ್ಮೀ ಎಂಬ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇನ್ನು 20 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡಿರುವವರನ್ನು ಕೊರಟಗೆರೆ ಮತ್ತು ತುಮಕೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

      ಅಪಘಾತಕ್ಕೆ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಕಾರಣ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯಲ್ಲೇ ಉರುಳಿಬಿದ್ದಿದೆ.

       ಇನ್ನು ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ