ಚಿಕ್ಕಮಗಳೂರು :
ಬೀಗರ ಔತಣಕ್ಕೆಂದು ಹೋದ ಐವರು ಯುವಕರು ನೀರು ಪಾಲಾಗಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಸಂಭವಿಸಿದೆ.
ರಘು (22) , ದಿಲೀಪ್ (24), ಸಂದೀಪ್ (23) ,ದೀಪಕ್ (25), ಸುದೀಪ್ (22) ಮೃತ ದುರ್ದೈವಿಗಳು.
ಬೀಗರ ಔತಣ ಕೂಟಕ್ಕೆ ಬಂದಿದ್ದ ಅವರು ಕೆರೆಯಲ್ಲಿ ಈಜಲು ತೆರಳಿದ್ದರು. ಆಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ನೀರು ಪಾಲಾದವರಿಗಾಗಿ ಶೋಧ ಕಾರ್ಯ ಆರಂಭಿಸಿದೆ. ಘಟನೆಗೆ ಸಂಬಂಧಿಸಿದಂತೆ ಆಲ್ದೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ