ರಾಜ್ಯ ಸರ್ಕಾರಕ್ಕೆ 50 ಕೋಟಿ ದಂಡ!

0
66

ಬೆಂಗಳೂರು:

Related image

      ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಬರೋಬ್ಬರಿ 75 ಕೋಟಿ ರೂಪಾಯಿ ದಂಡ ವಿಧಿಸಿದೆ.

     ನಿರಂತರ ಬೆಂಕಿ ಮತ್ತು ಭಾರಿ ಪ್ರಮಾಣದ ನೊರೆಯಿಂದ ಸುದ್ದಿಯಾಗಿದ್ದ ಬೆಳ್ಳಂದೂರು ಕೆರೆ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ದಂಡ ವಿಧಿಸಲಾಗಿದ್ದು, ಕೆರೆಗಳ ಸಂರಕ್ಷಣೆ ಹಾಗೂ ರಾಜಕಾಲುವೆಗಳ ಒತ್ತುವರಿ  ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಲಾಗಿದೆ.Related image

     ರಾಜ್ಯ ಸರ್ಕಾರಕ್ಕೆ 50 ಕೋಟಿ ರೂಪಾಯಿ ಮತ್ತು ಬಿಬಿಎಂಪಿಗೆ 25 ಕೋಟಿ ರೂಪಾಯಿ ದಂಡ ವಿಧಿಸಿದೆ. ಈ ದಂಡದ ಹಣವನ್ನು ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಟ್ಟಬೇಕು ಎಂದು ಸೂಚನೆ ನೀಡಿದೆ.

      ಕೆರೆಗಳ ರಕ್ಷಣೆಗೆ 500 ಕೋಟಿ ರೂಪಾಯಿ ಹಣ ಮೀಸಲಿಡಬೇಕು ಎಂದು ಸೂಚನೆ ನೀಡಿದೆ. ಕೆರೆಗಳ ದುಸ್ಥಿತಿಗೆ ಅಧಿಕಾರಿಗಳು ಕಾರಣವಾಗಿದ್ದಾರೆ ಎಂದು ಎನ್‌ಜಿಟಿ ಹೇಳಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here