ಕಲಬುರ್ಗಿ :
ಕೆಲವೇ ದಿನಗಳಲ್ಲಿ ಸುಮಾರು 50 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದರು.
ಕಲಬುರ್ಗಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರ್ಗಿ. ಇಂತಹ ಕಲಬುರ್ಗಿಯಲ್ಲಿ ಬಸವಕಲ್ಯಾಣ ಮಾದರಿಯಲ್ಲಿಯೇ 50 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲಾಗುತ್ತದೆ. ಉದ್ದೇಶಿತ ಅನುಭವ ಮಂಟಪದಲ್ಲಿ ಬೃಹತ್ ಗ್ರಂಥಾಲಯ, ಕಲ್ಯಾಣ ಮಂಟಪ, ಭಕ್ತ ನಿವಾಸ ಸೇರಿದಂತೆ ಎಲ್ಲ ರೀತಿಯ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ಸಿಎಂ, ಇದಕ್ಕಾಗಿ ಮೊದಲ ಕಂತಾಗಿ 20 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆನಂತ್ರ ಮುಂದುವರೆದು ಮಾತನಾಡಿದ ಅವರು, ಹೈದರಾಬಾದ್-ಕರ್ನಾಟಕ ಪ್ರದೇಶವನ್ನು ‘ಕಲ್ಯಾಣ ಕರ್ನಾಟಕ’ ಎಂದು ಮರುನಾಮಕರ ಮಾಡುವ ಮೂಲಕ ಈ ಭಾಗದ ಬಹುದಿನಗಳ ಕನಸನ್ನು ನನಸು ಮಾಡಲಾಗಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ