ಕಲಬುರ್ಗಿ ಅಭಿವೃದ್ಧಿಗೆ ಸರ್ಕಾರದಿಂದ 500ಕೋಟಿ!!?

ಕಲಬುರಗಿ :

       ಜಿಲ್ಲೆಯ ‌ಶಾಲಾ ಕಟ್ಟಡ ದುರಸ್ತಿ, ಹೊಸ ಕಟ್ಟಡ ನಿರ್ಮಾಣ, ಸಿ.ಸಿ. ರಸ್ತೆ ನಿರ್ಮಾಣ ಸೇರಿದಂತೆ ಒಟ್ಟಾರೆ ಜಿಲ್ಲೆಯ ಅಭಿವೃದ್ಧಿಗೆ ₹500 ಕೋಟಿ ವೆಚ್ಚ ಮಾಡಲು ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

      ಅವರು ಇಂದು ಕಲಬುರಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಈ ಹಿಂದೆ ಕಲಬುರಗಿ ಜಿಲ್ಲೆಯ ಹೇರೂರ ಬಿ.ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮಳೆಯಿಂದಾಗಿ ಮುಂದೂಡಲ್ಪಟ್ಟಿತ್ತು. ಈ ಗ್ರಾಮದಲ್ಲಿ ಸುಮಾರು 500 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದ್ದು, ಗ್ರಾಮದ ಅಭಿವೃದ್ಧಿಗೆ ಕ್ರಮ ಜರುಗಿಸಲಾಗಿದೆ ಎಂದರು.

      ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಯುವಕರ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ದೂರದೃಷ್ಟಿ ಹೊಂದಿದೆ   ಹೈ.ಕ. ಭಾಗದ ಎಲ್ಲ ಜಿಲ್ಲೆಗಳಲ್ಲಿ ಅವಶ್ಯಕವಿರುವ ಶಾಲಾ ಕೊಠಡಿಗಳ ಮಾಹಿತಿಯನ್ನು ಪಡೆಯಲಾಗಿದೆ. ಮುಂದಿನ 8-10 ದಿನಗಳಲ್ಲಿ ಸಭೆ ಕರೆದು ಎಲ್ಲ ಶಾಲೆಗಳ ದುರಸ್ತಿ, ಹೆಚ್ಚುವರಿ ಕಟ್ಟಡ ಮತ್ತು ಶಿಕ್ಷಕರ ಕೊರತೆ ನೀಗಿಸುವಲ್ಲಿ ಸೂಕ್ತ ನಿರ್ದೇಶನ ನೀಡಲಾಗುವುದು .ಹೈ.ಕ. ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಸಿಗುವ ಹಾಗೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷ ಬೇರೆ ಜಿಲ್ಲೆಗಳಿಗೆ ಹೋಲಿಕೆಯಾಗುವ ಹಾಗೆ ಹೈ.ಕ. ಭಾಗದ ಜಿಲ್ಲೆಯ ಫಲಿತಾಂಶವೂ ಹೆಚ್ಚಿಸುವಲ್ಲಿ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

      ಇನ್ನು ಹೈದರಾಬಾದ್ ಕರ್ನಾಟಕ ಭಾಗದ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಂದಿನವಾರ ಬೆಂಗಳೂರಿನಲ್ಲಿ ಈ ಭಾಗದ ಜನಪ್ರತಿನಿಧಿಗಳ ಸಭೆ ನಡೆಸಲಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap