ಮಂಡ್ಯ:
ಯಾವುದೇ ದಾಖಲೆಗಳಿಲ್ಲದೆ ತಮಿಳುನಾಡಿನಿಂದ ಕರ್ನಾಟಕದತ್ತ ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 52.60 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಮದ್ದೂರು ತಾಲೂಕಿನ ನಿಡಘಟ್ಟ ಚೆಕ್‍ಪೋಸ್ಟ್‍ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ತಮಿಳುನಾಡು ಮೂಲದ ಹೊಸೂರಿನ ಆದಿ ಎಂಬಾತನೇ ತನ್ನ ಕಾರಿನಲ್ಲಿ ದಾಖಲೆಯಿಲ್ಲದೆ ಅಂದಾಜು 52.60 ಲಕ್ಷ ರೂ.ಗಳನ್ನು ಸಾಗಿಸುತ್ತಿದ್ದ ವ್ಯಕ್ತಿ. ಈತ ಕಾರಿನ ಚಾಲಕ ಹಾಗೂ ಮಾಲೀಕನೂ ಆಗಿದ್ದು, ಈತ ಕಾರಿನಲ್ಲಿ 2 ಸಾವಿರ ಮತ್ತು ಐನೂರು ರೂಪಾಯಿ ಮುಖ ಬೆಲೆಯ ಕಂತೆಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದನು.
ನಿಡಘಟ್ಟ ಚೆಕ್ ಪೋಸ್ಟ್‍ನಲ್ಲಿ ಅನುಮಾನಗೊಂಡ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಈ ವೇಳೆ ಸಿಕ್ಕಿ ಬಿದ್ದಿದ್ದಾನೆ. ದಾಖಲೆಯಿಲ್ಲದ ಈ ಹಣವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಹಣವನ್ನು ತಮಿಳುನಾಡಿನಿಂದ ಕರ್ನಾಟಕದತ್ತ ಏಕೆ ಸಾಗಿಸುತ್ತಿದ್ದ, ಯಾರಿಗೆ ನೀಡಲು ಕೊಂಡೊಯ್ಯುತ್ತಿದ್ದ ಎಂಬುದು ತನಿಖೆಯಿಂದ ಬಹಿರಂಗಗೊಳ್ಳಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
