ಹೊಂಡಕ್ಕೆ ಉರುಳಿದ ಬಸ್ : 6 ಮಂದಿ ಸಾವು!!!

ರಾಂಚಿ:

      ಬಸ್ಸೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 33 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಸುಕಿನ ಜಾವ ಸುಮಾರು 2.30ಕ್ಕೆ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ.

      ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ತೆರಳುತ್ತಿದ್ದ ಬಸ್‌ ತಡೆಗೋಡೆಗೆ ಢಿಕ್ಕಿಯಾಗಿ ಹೊಂಡಕ್ಕೆ ಉರುಳಿದೆ.

      ಬಸ್ ಹೊಂಡಕ್ಕೆ ಉರುಳಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತಲುಪಿದ ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. 

      ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಆಸ್ಪತ್ರೆಗೆ ದಾಖಲಾದ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap