ಮಂಗಳೂರು:
ಅತಿ ವೇಗವಾಗಿ ಹರಡುತ್ತಿರುವಂತಹ ಮಂಗನ ಜ್ವರಕ್ಕೆ ವ್ಯಕ್ತಿಯೊಬ್ಬ ಮೃತಪಟ್ಟು ಮತ್ತೆ ಮೂವರಲ್ಲಿ ಜ್ವರ ಬಂದಿರುವ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈದ್ಯಕೀಯ ಹೈಅಲರ್ಟ್ ಘೋಷಣೆಯಾಗಿದೆ .
ಶಿವಮೊಗ್ಗದ ಲೋಕರಾಜ್ ಜೈನ್ ಎಂಬ 28 ವರ್ಷದ ವ್ಯಕ್ತಿಯನ್ನು ಕಳೆದ ಶನಿವಾರ ಚಿಕಿತ್ಸೆಗೆಂದು ಮಂಗಳೂರಿಗೆ ಕರೆತರಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆಂದು ಆಸ್ಪತ್ರೆ ಮೂಲಗಳು ತಿಳಿಸಿದ್ದಾರೆ .
ಮಂಗಳೂರಿನ ಎಜೆ ಆಸ್ಪತ್ರೆಗೆ ಕೋಮಾ ಸ್ಥಿತಿಯಲ್ಲಿದ್ದ ಲೋಕರಾಜ್ ಜೈನ್ ಕರೆತಂದಾಗ ಅವರು ಮೆದುಳಿನ ಸೋಂಕಿನಿಂದ ಬಳಲುತ್ತಿದ್ದರು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಂಗನ ಜ್ವರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮೃತಪಟ್ಟವರಲ್ಲಿ ಲೋಕರಾಜ್ ಜೈನ್ 6ನೆಯವರಾಗಿದ್ದಾರೆ. ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರವೀಣ್ ಪತ್ರಿಕೆಗಳಿಗೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
