ದೇಶದಲ್ಲಿ ಒಂದೇ ದಿನದಲ್ಲಿ 6 ಸಾವಿರ ಕೊರೊನಾ ಪ್ರಕರಣ!!

ನವದೆಹಲಿ:

    ದೇಶದಲ್ಲಿ ಇಂದು ಒಂದೇ ದಿನದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು 6 ಸಾವಿರ ಗಡಿ ದಾಟುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ. 

     ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,088 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 148 ಜನರು ಮೃತಪಟ್ಟಿದ್ದಾರೆ.

     ಭಾರತದಲ್ಲಿ ಇಲ್ಲಿಯವರೆಗೆ 1,18,447 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು,ಈವರೆಗೂ 66,330 ಸಕ್ರಿಯ ಕೊರೊನಾ ವೈರಸ್ ಸೋಂಕು ಪ್ರಕರಣಗಳಿವೆ.  48,533 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 3583ಕ್ಕೇರಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link