ಹುಬ್ಬಳ್ಳಿ-ಧಾರವಾಡ :
ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ವೈರಸ್ ಗೆ ಕರ್ನಾಟಕದಲ್ಲಿ 67ನೇ ಬಲಿಯಾಗಿದೆ.
ಮುಂಬೈನಿಂದ ಹುಬ್ಬಳ್ಳಿಗೆ ವಾಪಾಸ್ ಆಗಿದ್ದಂತ 58 ವರ್ಷದ ವ್ಯಕ್ತಿಯೊಬ್ಬರು ಕೊರೋನಾಗೆ ಇಂದು ಬಲಿಯಾದವರು.
ಸೋಂಕು ತಗುಲಿದ್ದ ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಾಕಿಯಾಗದೇ ಸೋಂಕಿತ ವ್ಯಕ್ತಿ ಸಾವನ್ನಪ್ಪಿರುವುದಾಗಿ ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಈ ಮೂಲಕ ಹುಬ್ಬಳ್ಳಿಯಲ್ಲಿ ಕೊರೋನಾಗೆ ಮೊದಲ ಬಲಿ ಪಡೆದಿದ್ದರೇ, ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ ನಿನ್ನೆ 308 ಜನರಿಗೆ ಕೊರೋನಾ ಸೋಂಕು ತಗುಲುವ ಮೂಲಕ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆಯಾಗಿತ್ತು. ಅಲ್ಲದೇ ಬೆಂಗಳೂರು ನಗರ, ಕಲಬುರ್ಗಿಯಲ್ಲಿ ಒಬ್ಬೊಬ್ಬರು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 66ಕ್ಕೆ ಏರಿಕೆಯಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ