ಕಾಲುವೆಗೆ ಉರುಳಿದ ವ್ಯಾನ್ : 7 ಮಕ್ಕಳು ಜಲಸಮಾಧಿ!!!

ಲಕ್ನೋ:

      ವ್ಯಾನ್ ವೊಂದು ಆಯತಪ್ಪಿ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ಮಕ್ಕಳು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದಲ್ಲಿ ಪಟ್ವಾ ಖೇಡಾ ಗ್ರಾಮದ ಬಳಿ ನಡೆದಿದೆ.

      ವಾಹನದಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ಸುಮಾರು 30 ಜನರಿದ್ದರು. ಎಲ್ಲಾ ಪ್ರಯಾಣಿಕರು ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು. ಆದರೆ ನಾಗ್ರಾಮ್ ಪ್ರದೇಶದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಮುಂಜಾನೆ 3 ಗಂಟೆ ಸುಮಾರಿಗೆ ನಾಗ್ರಾಮ್ ಪ್ರದೇಶದ ಇಂದಿರಾ ಕಾಲುವೆಗೆ ಬಿದ್ದಿದೆ. ಪರಿಣಾಮ 7 ಮಕ್ಕಳು ಮೃತಪಟ್ಟಿದ್ದಾರೆ.

      ವಾಹನ ಕಾಲುವೆಗೆ ಬಿದ್ದ ತಕ್ಷಣ ಸ್ಥಳೀಯರು 22 ಮಂದಿ ಅಪ್ರಾಪ್ತರನ್ನು ರಕ್ಷಿಸಿದ್ದಾರೆ. 7 ಜನ ಮಕ್ಕಳು ಕಣ್ಮರೆಯಾಗಿದ್ದಾರೆ. 

      ಈ ಅವಘಡದ ಮಾಹಿತಿ ತಿಳಿದ ತಕ್ಷಣ ರಕ್ಷಣಾ ಕಾರ್ಯಾಚರಣೆಗಾಗಿ ಎನ್‍ಡಿಆರ್‍ಎಫ್‍ನ ತಂಡ ಸ್ಥಳಕ್ಕೆ ದೌಡಾಯಿಸಿದೆ.  ಕಾಲುವೆಯಲ್ಲಿ ಶೋಧ ಮುಂದುವರಿಸಿವೆ.

      ಕಾಲುವೆಯಲ್ಲಿ ಬಲವಾದ ಹರಿವಿದ್ದು, ರಕ್ಷಣಾ ಕಾರ್ಯಾಚರಣೆ ಮಾಡಲು ಕಷ್ಟವಾಗುತ್ತಿದೆ. ಆದರೂ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಘಟನೆಯನ್ನು ಮುಖ್ಯಮಂತ್ರಿ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಆದೇಶಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link