ಬೆಂಗಳೂರು:
ರಾಜ್ಯದಲ್ಲಿ ಇಂದು ಒಂದೇ ದಿನ ಮಧ್ಯಾನವರೆಗೆ 7 ಮಂದಿ ಕೋರೋನಾ ಸೋಂಕಿತರು ಪತ್ತೆಯಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 214 ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಹೊಸದಾಗಿ ಇಂದು 7 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಒಬ್ಬರಿಗೆ, ಮೈಸೂರಿನ ಐವರಿಗೆ ಮತ್ತು ಬೀದರ್ ನ ಒಬ್ಬರಿಗೆ ಕೊರೊನಾ ವೈರಸ್ ಸೋಂಕ ಪಾಸಿಟಿವ್ ದೃಢಪಟ್ಟಿರುವುದಾಗಿ ತಿಳಿಸಿದೆ.
ಇಂದು ಹೊಸದಾಗಿ ಪತ್ತೆಯಾಗಿರುವ ಕೊರೊನಾ ವೈರಸ್ ಪ್ರಕರಣದಲ್ಲಿ ಎಲ್ಲರಿಗೂ ಈಗಾಗಲೇ ಪತ್ತೆಯಾದಂತ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲುವುದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
