ಟ್ರಕ್​ಗೆ ಹಿಂಬದಿಯಿಂದ ಗುದ್ದಿದ ಕಾರು : 8 ಮಂದಿ ಸಾವು!!!

ಓರಂಗ್ :

     ಕಾರೊಂದು ಟ್ರಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ಅಸ್ಸಾಂ ನ ಒರಂಗ್ ನಲ್ಲಿ ನಡೆದಿದೆ.

      ಮಂಗಲ್ದೊಯ್​ನಲ್ಲಿ ಮದುವೆ ಕಾರ್ಯಕ್ರಮವನ್ನು ಮುಗಿಸಿ ತೇಜ್ಪುರ್​ಗೆ ಹಿಂದಿರುಗುತ್ತಿರುವಾಗ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿತ್ತು. ಕಾರಿನಲ್ಲಿ ಸಿಲುಕಿದ್ದ ಶವಗಳನ್ನು ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಗಿದೆ ಎಂದು ತಿಳಿದು ಬಂದಿದೆ.

      ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap