ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ !!!

ಮೈಸೂರು : 

      ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

     ಚಾಮುಂಡಿ ಬೆಟ್ಟಕ್ಕೆ ಯುವತಿಯು ತನ್ನ ಪ್ರಿಯಕರನ ಜೊತೆ ತೆರಳಿದ್ದಳು. ಅವರಿಬ್ಬರು ಬೈಕ್​ನಲ್ಲಿ ವಾಪಸ್ ಬರುವಾಗ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದ ನಾಲ್ಕೈದು ಜನರ ಗುಂಪೊಂದು ಇವರನ್ನ ತಡೆದು, ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ತಿಳಿದುಬಂದಿದೆ.

    ಸದ್ಯ ಯುವತಿ ಹಾಗೂ ಆಕೆಯ ಪ್ರಿಯಕರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿ, ಘಟನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link