ಯಾದಗಿರಿ :
ನಗರದ ಜಿಲ್ಲಾಸ್ಪತ್ರೆಯಲ್ಲಿ ಮಹಾತಾಯಿಯೊಬ್ಬಳು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾಳೆ.
ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದ ಪದ್ಮಾ ಎಂಬು ಮಹಿಳೆಯು, ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ತುಂಬು ಗರ್ಭಿಣಿಯಾಗಿದ್ದ ಪದ್ಮಾ ಅವರನ್ನು ಕಳೆದ ಒಂದು ವಾರದ ಹಿಂದೆ, ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಾಗಿತ್ತು. ಆಸ್ಪತ್ರೆಯ ವೈದ್ಯರು ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಾರೆ.
ಮೂವರು ಗಂಡು ಮಕ್ಕಳಿಗೆ ಜನ್ಮ ನೀಡಿದಂತ ಮಹಾತಾಯಿ ಪದ್ಮಾ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ತಾಯಿಗೆ ರಕ್ತದ ಅವಶ್ಯಕತೆ ಇದ್ದು, ಬಡ ಕುಟುಂಬ ಸಹಾಯಕ್ಕೆ ದಾನಿಗಳ ನೆರವು ಬಯಸಿದೆ.
ಮೊದಲ ಹೆರಿಗೆ ಬಳಿಕ ಈಗ ಪದ್ಮಾ ಮೂರು ಮಕ್ಕಳಿಗೆ ಜನ್ಮ ನೀಡಿದ್ದು, ಒಂದು ಕಡೆ ದಂಪತಿಗೆ ಖುಷಿ ತಂದರೆ ಇನ್ನೊಂದೆಡೆ ಕೂಲಿ ಕೆಲಸ ಮಾಡುತ್ತಿರುವ ಕುಟುಂಬಕ್ಕೆ ಮಕ್ಕಳ ಲಾಲನೆ, ಪಾಲನೆ ಮಾಡುವದು ಹೇಗೆ ಅನ್ನೋ ಚಿಂತೆ ಎದುರಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/08/3-childs.jpg)