ಗದಗ:
ro
ಜಿಲ್ಲೆಯ ಲಕ್ಕುಂಡಿಯಲ್ಲಿ 44 ವರ್ಷದ ಪುರೋಹಿತರೊಬ್ಬರು ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಮೃತ ಪುರೋಹಿತರು ಮದುವೆ, ಗೃಹಪ್ರವೇಶಗಳನ್ನು ನೆರವೇರಿಸಿ ಕೊಡುತ್ತಿದ್ದರು. ಇತ್ತೀಚೆಗಷ್ಟೇ ಹಲವಾರು ಮದುವೆಗಳನ್ನು ಮಾಡಿಸಿದ್ದಾರೆ. ಇದೀಗ ಈ ಪುರೋಹಿತರು ಮದುವೆ ಮಾಡಿಸಿರುವ ವಧು-ವರರಿಗೆ ಪೀಕಲಾಟ ಶುರುವಾಗಿದೆ. ಮದುವೆಯಲ್ಲಿ ಸೇರಿದ್ದವರಿಗೂ ಕೊರೊನಾ ಆತಂಕ ಶುರುವಾಗಿದೆ.
ಪುರೋಹಿತರ ಟ್ರಾವೆಲ್ ಹಿಸ್ಟರಿಯನ್ನು ಸಂಗ್ರಹಿಸುತ್ತಿರುವ ಆರೋಗ್ಯ ಅಧಿಕಾರಿಗಳು ಈಗಾಗಲೇ ಲಕ್ಕುಂಡಿ ಗ್ರಾಮವನ್ನು ಸೀಲ್ಡೌನ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ