ರಾಮನಗರ:
ವಿದ್ಯುತ್ ಕಂಬಕ್ಕೆ ಕ್ಸೈಲೋ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ರಾಮನಗರ ಜಿಲ್ಲೆಯ ಗುಡೇಮಾರನಹಳ್ಳಿ ಬಳಿ ಬುಧವಾರ ರಾತ್ರಿ ನಡೆದಿದೆ.
ಶಬರಿಗೆಮಲೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕಾಸರಗೋಡು ಜಿಲ್ಲೆಯ ಹೊಸಂಗಡಿ ಮೂಲದವರಾದ ಮಹಾಬಲ, ರಾಘವೇಂದ್ರ, ಕೇಶವ ಮೃತಪಟ್ಟ ದುರ್ದೈವಿಗಳು.
ಮೃತರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ ಬರುತ್ತಿದ್ದವರು ಎಂದು ಗುರುತಿಸಲಾಗಿದೆ. ಕಾರು ಚಾಲಕ ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಪರಿಣಾಮ ಹೆದ್ದಾರಿಯ ಮೇಲ್ಸೇತುವೆಯ ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ.
ಇನ್ನು ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ