ತುಮಕೂರು:

ತುಮಕೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ವಾಹನ ದಗ ದಗ ಹೊತ್ತಿಉರಿದ ಘಟನೆ ನಡೆದಿದೆ.
ವಾಹನದದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ತಕ್ಷಣ ಚಾಲಕ ವಾಹನ ಚಾಲನೆ ಸ್ಥಗಿತಗೊಳಿಸಿ, ಏನಾಗಿದೆ ಎಂದು ಚಾಲಕ ಪರೀಕ್ಷಿಸಲು ಮುಂದಾಗುತ್ತಿದ್ದಂತೆ ಟೆಂಪೋ ಟ್ರಾವೆಲರ್ ಒಳಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಇದರಿಂದ ಎಚ್ಚೆತ್ತುಕೊಂಡ ಚಾಲಕ ತಕ್ಷಣ ವಾಹನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ನೋಡ ನೋಡುತ್ತಿದ್ದಂತೆ ವಾಹನ ಧಗ ಧಗ ಹೊತ್ತಿ ಉರಿದಿದೆ.
ಭಾರಿ ಪ್ರಮಾಣದಲ್ಲಿ ಬೆಂಕಿ ಜ್ವಾಲೆ ವ್ಯಾಪಿಸಿದ್ದರಿಂದ ಇನ್ನಿತರ ವಾಹನ ಚಾಲಕರು, ಜನರು ಕೆಲಕಾಲ ಗಾಬರಿಗೊಂಡರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
