ಚಿಂತಾಮಣಿ :
ಟಾಟಾ ಏಸ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ 11 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಬಳಿ ನಡೆದಿದೆ.
ಇಂದು ಬೆಳಗ್ಗೆ ಚಿಂತಾಮಣಿ ಕಡೆಯಿಂದ ಮುರುಗಮಲ್ಲ ಕಡೆ ಹೋಗುತ್ತಿದ್ದ ಟಾಟಾ ಏಸ್ ಮತ್ತು ಮುರುಗಮಲ್ಲ ಕಡೆಯಿಂದ ಚಿಂತಾಮಣಿಗೆ ಹೋಗುತ್ತಿದ್ದ ಬಸ್ ನಡುವೆ ಭೀಕರ ಅಪಘಾತ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಚಿಂತಾಮಣಿ, ಕೋಲಾರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತಪಟ್ಟವರೆಲ್ಲ ಟಾಟಾ ಏಸ್‍ನಲ್ಲಿದ್ದ ಪ್ರಯಾಣಿಕರು ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಗೆ ಖಾಸಗಿ ಬಸ್ ಚಾಲಕನ ಅತಿ ವೇಗವೇ ಕಾರಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ