ಭೀಕರ ಸರಣಿ ಅಪಘಾತ : ಇಬ್ಬರ ದುರ್ಮರಣ!!!

 ವಿಜಯಪುರ:

      ಭೀಕರ ಸರಣಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೋಲಾರ ಬಳಿಯ ಕೃಷ್ಣಾ ನದಿ ಸೇತುವೆ ಮೇಲೆ ನಡೆದಿದೆ.

      ಲಾರಿಯೊಂದಕ್ಕೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಅದರ ಹಿಂದಿನಿಂದ ಬರುತ್ತಿದ್ದ ಕಾರು ಟಿಪ್ಪರ್ ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಟಿಪ್ಪರ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.

      ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

       ಘಟನಾ ಸ್ಥಳಕ್ಕೆ ಕೋಲಾರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap