ಕೂಡ್ಲಿಗಿ :
ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಟಾಟಾ ಏಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಹೊರವಲದ ಶಿವಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಪ್ರಕಾಶ್ (35), ನಾಗರಾಜ್ (60), ನಾಗಮ್ಮ (30) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಇನ್ನು ಗಾಯಗೊಂಡಿರುವ ಗುರು ಎಂಬಾತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
