ಬೆಳಗಾವಿ:
ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ -4 ಶ್ರೀನಗರ ಬಳಿ ನಡೆದಿದೆ.
ಕೊಲ್ಲಾಪುರದಿಂದ ಬೆಳಗಾವಿತ್ತ ಬರುತ್ತಿದ್ದ ಕಾರಿನ ಟೈರ್ ಸ್ಟೋಟಗೊಂಡು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿವದ್ದರು ಮಹಾರಾಷ್ಟ್ರಮೂಲವದರಾಗಿದ್ದಾರೆ ಎಂದು ತಿಳಿದು ಬಂದಿದ್ದು, ಮೃತರು ಮಹಾರಾಷ್ಟ್ರದ ಕೊಲ್ಲಾಪುರದಿಂದ ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳ್ತಾ ಇದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಘಟನೆಯಿಂದ ಓರ್ವನಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ