ಕಂಟೇನರ್ ಗಳ ಮುಖಾಮುಖಿ : ಚಾಲಕರಿಬ್ಬರ ಸಜೀವ ದಹನ!!

ವಿಜಯಪುರ:

     ಕಂಟೇನರ್ ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಸಜೀವ ದಹನವಾದ ಘಟನೆ ವಿಜಯಪುರದಲ್ಲಿ ನಡೆದಿದೆ.

      ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 14 ರಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಕಂಟೇನರ್​ಗಳು ಸುಮಾರು ಎರಡು ಗಂಟೆಗಳ ಕಾಲ ಹೊತ್ತಿ ಉರಿದಿವೆ.

      ಬೆಂಕಿ ನೋಡಿದ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಆದರೆ, ಸಜೀವ ದಹನವಾಗುತ್ತಿರುವ ಇಬ್ಬರು ಚಾಲಕರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ಕಂಟೇನರ್ ನಲ್ಲಿದ್ದ ಕ್ಲೀನರ್ ಪಾರಾಗಿದ್ದಾನೆ. ಮೃತಪಟ್ಟವರ ಹೆಸರು‌ ಮತ್ತು ವಿಳಾಸ ತಿಳಿದುಬಂದಿಲ್ಲ.

      ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ನಂತರ ಬೆಂಕಿ ನಂದಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲಾಯಿತು. ಈ ಸಂಬಂಧ ಹೊರ್ತಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link