ಚಿತ್ರದುರ್ಗ :
ಲಾರಿ-ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಚಾಲಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಾರಿ ಚಾಲಕ ಶಿವರಾಜ್, ಟಿಪ್ಪರ್ ಚಾಲಕ ಸುರೇಂದ್ರ ಮೃತ ದುರ್ದೈವಿಗಳು. ತಳಕು ಕಡೆಯಿಂದ ಹೋಗುತ್ತಿದ್ದ ಟಿಪ್ಪರ್ಗೆ ಮೊಳಕಾಲ್ಮೂರು ಕಡೆಯಿಂದ ಬಂದ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಲಾರಿಯಲ್ಲಿದ್ದ ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಗ್ರಾಮದ ಪ್ರಕಾಶ್, ಆಂಜನೇಯ, ತಿಪ್ಪೇಶಿ ತಿಪ್ಪೇಸ್ವಾಮಿಯವರಿಗೆ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆಗೆ ಸಂಬಂಧಿಸಿದಂತೆ ತಳಕು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
