ದಾವಣಗೆರೆ :
ಗ್ಯಾಸ್ ಟ್ಯಾಂಕರ್ ಹಾಗೂ ಟೈರ್ ಸಾಗಣೆ ಮಾಡುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಅವಗಢ ಸಂಭವಿಸಿ ಮೂವರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹರಿಯಾಣ ರಾಜ್ಯಕ್ಕೆ ಸೇರಿದ ಗ್ಯಾಸ್ ಟ್ಯಾಂಕರ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ಟಯರ್ ಗಳನ್ನು ತುಂಬಿದ್ದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ಗ್ಯಾಸ್ ಟ್ಯಾಂಕರ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದು, ಒಂದು ಲಾರಿಯಲ್ಲಿ 2 ದೇಹ ಹಾಗೂ ಮತ್ತೊಂದು ಲಾರಿಯಲ್ಲಿ 1 ದೇಹ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.
ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಅಪಘಾತದ ಹಿನ್ನಲೆ ದಟ್ಟವಾದ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿ ಶ್ಯಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದೆ.
ಇದರಿಂದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ವಾಹನಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಿದ್ದವು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
