ಕೋಲಾರ :
ಎರಡು ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲಗ ರಸ್ತೆಯ ಹರಿಪುರ ಗೇಟ್ ಬಳಿ ನಡೆದಿದೆ.
ನೊಸಗೆರೆಯ ಮುನಿರಾಜು (35), ಪ್ರವೀಣ್ (9) ಹಾಗೂ ಟೇಕಲ್ನ ಅನಿಲ್ (24) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು.
ಕುಪ್ಪಂನಿಂದ ಮಾಲೂರಿಗೆ ಹೊರಟಿದ್ದ ಬೈಕ್ ಹಾಗೂ ಮಾಲೂರು ಪಟ್ಟಣದಿಂದ ಟೇಕಲ್ಗೆ ಹೊರಟ್ಟಿದ್ದ ಬೈಕ್ ನಡುವೆ ಹರಿಪುರ ಗೇಟ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಪರಿಣಾಮ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮುನಿರಾಜು ಹಾಗೂ ಅನಿಲ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಮುನಿರಾಜು ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದಾಗಿ ಎರಡೂ ಬೈಕ್ಗಳು ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
