ಕಾರವಾರ :
ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.
ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತರು.
ಮಗಳನ್ನು ಯಲ್ಲಾಪುರದಿಂದ ತಮ್ಮ ಸ್ವಂತ ಊರಾದ ಅಂಕೋಲಾ ತಾಲೂಕಿನ ಹಾರವಾಡಾಕ್ಕೆ ಬಿಡಲು ವಿನೋದ್ ಹೊರಟಿದ್ದರು ಎನ್ನಲಾಗಿದೆ. ಆದರೆ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿವೆ.
ಪರಿಣಾಮ ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿದ್ದಾರೆ. ಇನ್ನೂ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದ್ದು, ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
